ವರ್ಕಾಡಿ ಪಂಚಾಯತ್ ಬಿಜೆಪಿ ನೂತನ ಕಾರ್ಯಾಲಯ ಉದ್ಘಾಟನೆ ನಾಳೆ
ವರ್ಕಾಡಿ: ಬಿಜೆಪಿ ವರ್ಕಾಡಿ ಪಂಚಾಯತ್ ಸಮಿತಿಯ ನೂತನ ಕಾರ್ಯಾಲಯ ಕಟ್ಟಡದ ಉದ್ಘಾಟನೆ ನಾಳೆ ಬೆಳಿಗ್ಗೆ 10ಕ್ಕೆ ನಡೆಯಲಿದೆ. ವರ್ಕಾಡಿ ಸುಂಕದಕಟ್ಟೆಯಲ್ಲಿ ದಾನಿಗಳ ಸಹಾಯದಿಂದ ನಿರ್ಮಿಸಿದ ಪಕ್ಷದ ನೂತನ ಕಾರ್ಯಾಲಯದ ಉದ್ಘಾಟನೆಯಂಗವಾಗಿ ಬೆಳಿಗ್ಗೆ 8.30ಕ್ಕೆ ಗಣಹೋಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ, ಜಿಲ್ಲಾ, ಮಂಡಲ, ಪಂಚಾಯತ್ ಸಮಿತಿ ಪದಾಧಿಕಾರಿಗಳು, ಧಾರ್ಮಿಕ ಮುಖಂಡರು ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.