ಜಿಲ್ಲಾ ಕನ್ನಡ ಪತ್ರಕರ್ತರ ಸಂಘದಿಂದ ಪತ್ರಿಕಾದಿನಾಚರಣೆ, ಕುಟುಂಬ ಮಿಲನ
ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ನಿನ್ನೆ ನೀಲೇಶ್ವರ ಹೌಸ್ ಬೋಟ್ನಲ್ಲಿ ಕನ್ನಡ ಪತ್ರಿಕಾ ದಿನಾಚ ರಣೆ ಹಾಗೂ ಕನ್ನಡ ಪತ್ರಕರ್ತರ ಕುಟುಂಬ ಮಿಲನ ಕಾರ್ಯಕ್ರಮ ಜರಗಿತು. ಕರ್ನಾಟಕ ಸರಕಾರದ ಮಾಹಿತಿ ಆಯುಕ್ತ ಬದ್ರುದ್ದೀನ್ ಕೆ. ಮಾಣಿ ದೀಪ ಬೆಳಗಿಸಿ ಚಾಲನೆ ನೀಡಿದರು. ಈ ವೇಳೆ ಕೆ.ಯು. ಡಬ್ಲ್ಯು.ಜೆ ರಾಜ್ಯ ಘಟಕ ಅಧ್ಯಕ್ಷ ಶಿವಾನಂದ ತಗಡೂರು ಪತ್ರಿಕಾ ದಿನ ಸಂದೇಶ ನೀಡಿದರು. ಹಿರಿಯ ಪತ್ರಕರ್ತ ಗಂಗಾಧರ ಪಿಲಿಯೂರು ಅವರಿಗೆ ಪತ್ರಿಕಾ ದಿನ ಪ್ರಶಸ್ತಿ, ಶಿಕ್ಷಣ ತಜ್ಞ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಇವರಿಗೆ ಗೌರವಾರ್ಪಣೆ ನಡೆಯಿತು. ಇದೇ ವೇಳೆ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಇವರಿಗೆ ಅವ್ವ ಸೇವಾ ಟ್ರಸ್ಟ್ ಹುಬ್ಬಳ್ಳಿ ನೀಡುವ ದತ್ತಿನಿಧಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕಾರ್ಯಕ್ರಮ ದಲ್ಲಿ ಪ್ರೊ. ಎ. ಶ್ರೀನಾಥ್, ಮಲಾರ್ ಜಯರಾಮ ರೈ, ಟಿ.ವಿ. ಗಂಗಾಧರನ್, ಮಂಜುನಾಥ ಆಳ್ವ ಮಡ್ವ, ಜಯಾನಂದ ಕುಮಾರ್ ಹೊಸದುರ್ಗ, ವಾಮನ್ ರಾವ್ ಬೇಕಲ್, ಚನಿಯಪ್ಪ ನಾಯ್ಕ, ಪ್ರವೀಣ್ ಕುಮಾರ್ ಕೊಡಿಯಾಲ್ಬೈಲು, ತಿರುಮಲೇಶ್ವರ ಭಟ್ ಪಜ್ವ ಉಪಸ್ಥಿತರಿದ್ದರು. ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಗಂಗಾಧರ ತೆಕ್ಕೇಮೂಲೆ ಸ್ವಾಗತಿಸಿ, ಕೋಶಾಧಿಕಾರಿ ಶ್ರೀಕಾಂತ್ ನೆಟ್ಟಣಿಗೆ ವಂದಿಸಿದರು. ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ನಿರೂಪಿಸಿದರು. ಕೆಯುಡಬ್ಲ್ಯುಜೆ ಜಿಲ್ಲಾ ಘಟಕ ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ, ರಾಜ್ಯ ಸಮಿತಿ ಸದಸ್ಯ ಅಖಿಲೇಶ್ ನಗುಮುಗಂ, ಜಿಲ್ಲಾ ಘಟಕ ಕಾರ್ಯದರ್ಶಿ ಪುರುಷೋ ತ್ತಮ ಭಟ್ ಕೆ, ವೀಜಿ ಕಾಸರಗೋಡು ಸಹಿತ ಹಲವರು ಭಾಗವಹಿಸಿದರು. ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು ವಿಜೇತರಿಗೆ ಬಹುಮಾನ ವಿತರಿಸಲಾಯಿತು.