ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ನಿಧನ
ಬೆಂಗಳೂರು: ಕನ್ನಡ, ತಮಿಳು ಸೇರಿದಂತೆ ದಕ್ಷಿಣ ಭಾರತದ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾದೇವಿ (87) ಇಂದು ಬೆಳಿಗ್ಗೆ ನಿಧನಹೊಂದಿದರು. ಇವರು ಕಳೆದ ಕೆಲವು ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೂವರೆ ದಶಕಗಳ ಕಾಲ ಚಿತ್ರರಂಗದಲ್ಲಿ ನಟಿಯಾಗಿ ಮಿಂಚಿದ್ದರು. 2019ರಲ್ಲಿ ಬಿಡುಗಡೆ ಗೊಂಡ ಪುನೀತ್ ರಾಜ್‌ಕುಮಾರ್ ನಾಯಕನಾಗಿ ಅಭಿನಯಿಸಿದ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ. 1938 ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದ ಸರೋಜಾ ದೇವಿ ದಕ್ಷಿಣ ಭಾರತದ ಹಲವು ಮೇರು ನಟರೊಂದಿಗೆ ನೂರಾರು ಚಿತ್ರಗಳಲ್ಲಿ ನಾಯಕಿಯಾಗಿ ಅಭಿನಯಿಸಿದ್ದರು. ಸರೋಜಾದೇವಿ ಯವರ ನಿಧನಕ್ಕೆ ಚಿತ್ರರಂಗದ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.