ಕಾಂಗ್ರೆಸ್ನ ಹೋರಾಟ ಸಂಗಮ ಆರಂಭ: ಕೆಪಿಸಿಸಿ ಅಧ್ಯಕ್ಷರಿಂದ ಉದ್ಘಾಟನೆ
ಕಾಸರಗೋಡು: ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನದ್ರೋಹ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಹಾಗೂ ಅಂತಹ ನೀತಿಗಳನ್ನು ಪ್ರತಿಭಟಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಹೋರಾಟ ಸಂಗಮ ಕಾರ್ಯಕ್ರಮ ಆರಂಭಗೊಂಡಿತು.
ಕಾಂಗ್ರೆಸ್ ರಾಜ್ಯ ಘಟಕ ಅಧ್ಯಕ್ಷ ಶಾಸಕ ಸಣ್ಣಿ ಜೋಸೆಫ್ ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಕಾಸರಗೋಡು ಟೌನ್ಹಾಲ್ನಲ್ಲಿ ನಡೆದ ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಕೆ. ಫೈಸಲ್ ವಹಿಸಿದರು. ಕಾಂಗ್ರೆಸ್ನ ರಾಜ್ಯ ಕಾರ್ಯನಿರ್ವಹಣಾಧ್ಯಕ್ಷ ಎ.ಪಿ. ಅನಿಲ್ ಕುಮಾರ್, ಯುಡಿಎಫ್ ರಾಜ್ಯ ಸಂಚಾಲಕ ಅಡೂರು ಪ್ರಕಾಶ್, ಸಂಸದ ರಾಜ್ಮೋಹನ್ ಉಣ್ಣಿತ್ತಾನ್ ಸೇರಿ ದಂತೆ ಕಾಂಗ್ರೆಸ್ನ ಹಲವು ಗಣ್ಯ ನೇತಾ ರರು ಇದರಲ್ಲಿ ಭಾಗವಹಿಸುತ್ತಿದ್ದಾರೆ. ಎಂ.ಸಿ. ಪ್ರಭಾಕರನ್ ಸ್ವಾಗತಿಸಿದರು.
ಇಂದು ಬೆಳಿಗ್ಗೆ ಕಾಸರಗೋಡಿಗೆ ಆಗಮಿಸಿದ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಇತರ ರಾಜ್ಯ ನೇತಾರರಿಗೆ ಕಾಸರಗೋಡು ರೈಲು ನಿಲ್ದಾಣದಲ್ಲಿ ಕಾರ್ಯಕರ್ತರು ಸ್ವಾಗತ ನೀಡಿದರು.