ಕಡಲ್ಕೊರೆತ: ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿಯಿಂದ ಸಚಿವರಿಗೆ ಮನವಿ

ಉಪ್ಪಳ: ಉಪ್ಪಳ, ಮಂಜೇಶ್ವರ ತೀರ ಪ್ರದೇಶದ ವಿವಿಧ ಕಡೆಗಳಲ್ಲಿ ಕಡಲ್ಕೊರೆತದಿಂದ ಉಂಟಾಗಿರುವ ಹಾನಿ ಹಾಗೂ ಸ್ಥಳೀಯರು ಅನುಭವಿಸುವ ಸಂಕಷ್ಟಗಳ ಬಗ್ಗೆ ವಿವರಿಸಿ ಮೀನುಗಾರಿಕೆ, ಬಂದರು ಸಚಿವ ಸಜಿ ಚೆರಿಯಾನ್‌ಗೆ ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿ ಮನವಿ ನೀಡಿದೆ. ಕಳೆದ ಹಲವು ದಿನಗಳಿಂದ ಈ ಪ್ರದೇಶದಲ್ಲಿ ಉಂಟಾಗುತ್ತಿರುವ ಕಡಲ್ಕೊರೆತ, ನಾಶನಷ್ಟಗಳ ಬಗ್ಗೆ ಪತ್ರಿಕೆಯಲ್ಲಿ ವರದಿ ಮಾಡಲಾಗುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮ ಕೈಗೊಳ್ಳಲು ಮನವಿಯಲ್ಲಿ ಆಗ್ರಹಿಸಲಾಗಿದೆ. ಸಿಪಿಎಂ ಜಿಲ್ಲಾ ಕಾರ್ಯಕಾರಿ ಸದಸ್ಯ ಕೆ.ಆರ್. ಜಯಾನಂದ ಮನವಿ ಪತ್ರವನ್ನು ಸಚಿವರಿಗೆ ಹಸ್ತಾಂತರಿಸಿದರು.

You cannot copy contents of this page