ಮಂಜೇಶ್ವರ ಮಂಡಲ ಕಾಂಗ್ರೆಸ್: ನೂತನ ಮಂಡಲ ಅಧ್ಯಕ್ಷರ ವಿರುದ್ಧ ಸಭೆಯಲ್ಲಿ ಪ್ರತಿಭಟನೆ

ಮಂಜೇಶ್ವರ: ನಿನ್ನೆ ಜರಗಿದ ಮಂಜೇಶ್ವರ ಮಂಡಲ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಹೊಸತಾಗಿ ನೇಮಕಮಾಡಿದ ಮಂಡಲ ಅಧ್ಯಕ್ಷರ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸಲಾಯಿತು. ಹೊಸ ಅಧ್ಯಕ್ಷರ ಬಗ್ಗೆ ವಿರೋಧ ವ್ಯಕ್ತಪಡಿಸಿ ಈ ಹಿಂದೆ ಡಿಸಿಸಿಗೆ ತಿಳಿಸಿದ್ದರೂ ಇದುವರೆಗೂ ಯಾವುದೇ ಪರಿಹಾರ ಉಂಟಾಗದ ಬಗ್ಗೆಯೂ ಸಭೆಯಲ್ಲಿ ಪ್ರತಿಭಟನೆ ವ್ಯಕ್ತಪಡಿಸಲಾಯಿತು. ಕೆಪಿಸಿಸಿ ಹೇಳಿದ ನ.೫ರ ಮುಂಚಿತ ಮಂಡಲ ಸಮಸ್ಯೆಗಳಿಗೆ  ಪರಿಹಾರ ಉಂಟಾಗದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದೆಂದು ಸಭೆಯಲ್ಲಿ ಅಭಿಪ್ರಾಯಪಡಲಾಗಿದೆ.

RELATED NEWS

You cannot copy contents of this page