ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪ್ರಥಮ ವರ್ಷ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆಗೈದ ಘಟನೆ ನಿನ್ನೆ ನಡೆದಿದೆ. ಬೆಳಗಾವಿ ಅಥಣಿ ನಿವಾಸಿ ಪ್ರಕೃತಿ ಶೆಟ್ಟಿ (೨೦) ಆತ್ಮಹತ್ಯೆಗೈದವರು. ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದ ಇವರು ಆರನೇ ಮಹಡಿಯಿಂದ ಕೆಳಗೆ ಹಾರಿದ್ದಾರೆ. ಹೆಚ್ಚು ದಪ್ಪಗಿದ್ದು, ಸಪೂರವಾಗಲು ಪ್ರಯತ್ನಿಸಿಯೂ ಫಲವಿಲ್ಲದ ಕಾರಣ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಳ್ಳುತಿ ರುವುದಾಗಿ ಡೆತ್ ನೋಟ್‌ನಲ್ಲಿ ಬರೆದಿಟ್ಟಿದ್ದಾರೆ. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

RELATED NEWS

You cannot copy contents of this page