ಪೆರ್ಮುದೆಯಲ್ಲಿ ಕ್ರಿಸ್ಮಸ್ ಆಚರಣೆ

ಪೆರ್ಮುದೆ: ಕ್ರಿಸ್ಮಸ್ ಆಚರಣೆಯ ಅಂಗವಾಗಿ ಭಾನುವಾರ ರಾತ್ರಿ ಪೆರ್ಮುದೆ ಲಾರೆನ್ಸ್ ನಗರದ ಸೈಂಟ್ ಲಾರೆನ್ಸ್ ದಿ ಮಾರ್ಟಿರ್ ಇಗರ್ಜಿ ಯಲ್ಲಿ ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು. ದಿವ್ಯಬಲಿಪೂಜೆಗೆ ವಂ| ಫಾ| ಮೆಲ್ವಿನ್ ಫೆರ್ನಾಂಡಿಸ್ ನೇತೃತ್ವ ನೀಡಿದರು. ಕ್ರಿಸ್ಮಸ್ ಹಬ್ಬದ ಅಂಗವಾಗಿ ಕ್ಯಾರಲ್ಸ್ ಗಾಯನ ನಡೆಯಿತು. ಕ್ರಿಸ್ಮಸ್ ಸಂದೇಶ ಸಾರುವ ಕ್ರಿಸ್ಮಸ್ ಟ್ರೀ, ಗೋದಲಿ, ಕ್ರಿಸ್ಮಸ್ ತಾತಾನ ಕುಣಿತ, ಸಿಡಿಮದ್ದು ಗಮನ ಸೆಳೆದುವು.
ಪೆರ್ಮುದೆ ಸೈಂಟ್ ಲಾರೆನ್ಸ್ ಅಸೋಸಿಯೇಶನ್‌ನ ಆಶ್ರಯದಲ್ಲಿ ಕ್ರಿಸ್ಮಸ್ ಸೌಹಾರ್ದಕೂಟ ನಡೆಯಿತು. ಸಮಾಜ ಸೇವಕ ಹರೀಶ ಬೊಟ್ಟಾರಿ, ಕೇರಳ ಮುಸ್ಲಿಂ ಜಮಾಅತ್ ಸಮಿತಿ ಕಾರ್ಯದರ್ಶಿ ಅಬ್ದುಲ್ ಖಾದರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ದ್ದರು. ವಂ| ಫಾ| ಮೆಲ್ವಿನ್ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಇಗರ್ಜಿಯ ಪಾಲನ ಸಮಿತಿ ಉಪಾಧ್ಯಕ್ಷೆ ಡೋರಿನ್ ಪಿರೆರಾ, ಕಾರ್ಯದರ್ಶಿ ಲ್ಯಾನ್ಸಿ ಡಿಸೋಜ, ಇಗ ರ್ಜಿಯ ಇಪ್ಪತ್ತೊಂದು ಆಯೋಗಗಳ ಸಂಚಾಲಕ ಪೀಟರ್ ರೋಡ್ರಿಗಸ್, ಅಂತರ್‌ಧರ್ಮೀಯ ಸಂವಾದ ಆಯೋಗದ ಸಂಚಾಲಕ ವಿನ್ಸೆಂಟ್ ರೋಡ್ರಿಗಸ್ ಉಪಸ್ಥಿತರಿದ್ದರು. ಸೈಂಟ್ ಲಾರೆನ್ಸ್ ಅಸೋಸಿಯೇಶನ್ ಅಧ್ಯಕ್ಷ ಜೋಕಿಂ ಪ್ರಶಾಂತ್ ಕ್ರಾಸ್ತ ಸ್ವಾಗತಿಸಿ, ಕಾರ್ಯದರ್ಶಿ ಸಿಪ್ರಿಯನ್ ಡಿಸೋಜ ವಂದಿಸಿದರು. ಮೆಲ್ವಿನ್ ಡಿಸೋಜ ನಿರೂಪಿಸಿದರು. ಬಳಿಕ ಇಗರ್ಜಿಯ ವಿವಿಧ ಪ್ರತಿಭೆಗಳಿಂದ ಮನೋರಂ ಜನಾ ಕಾರ್ಯಕ್ರಮಗಳು ನಡೆದುವು.

RELATED NEWS

You cannot copy contents of this page