ಕಾಸರಗೋಡು: ಕಾಸರಗೋಡಿನ ಕನ್ನಡಭವನ ಮತ್ತು ಗ್ರಂಥಾಲಯ ಕೊಡಮಾಡುವ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಸಾಹಿತಿ ಗಣೇಶ್ ಕಾಸರಗೋಡು ಅವರನ್ನು ಆಯ್ಕೆ ಮಾಡಲಾಗಿದೆ. ಈ ತಿಂಗಳ 27ರಂದು ಸಂಜೆ 5 ಗಂಟೆಗೆ ಕಾಸರಗೋಡು ಕನ್ನಡಭವನ ಸಮುಚ್ಚಯದ ಸಭಾಂಗಣ ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗಣೇಶ್ ಕಾಸರಗೋಡು ಅವರನ್ನು ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ವಾಮನ್ ರಾವ್ ಬೇಕಲ್, ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.
