ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ನೀಡಲಾದ ಜಾಮೀನನ್ನು ಸುಪ್ರೀಂಕೋರ್ಟ್ ಇಂದು ಬೆಳಿಗ್ಗೆ ರದ್ದುಪಡಿಸಿದೆ. ಈ ಏಳು ಮಂದಿ ಆರೋಪಿಗಳಿಗೆ ಈ ಹಿಂದೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದರ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್ ಆರೋಪಿಗಳಿಗೆ ಮಂಜೂರು ಮಾಡಲಾದ ಜಾಮೀನನ್ನು ರದ್ದುಪಡಿಸಲು ತೀರ್ಪು ನೀಡಿದೆ.
