ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣೆಯ ಎಎಸ್ಐ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುತ್ತಿಕ್ಕೋಲ್ ನಿವಾಸಿಯಾದ ಮಧುಸೂದನ(50) ಎಂಬವರು ಮೃತಪಟ್ಟ ವ್ಯಕ್ತಿ. ಇಂದು ಬೆಳಿಗ್ಗೆ ಪೊಲೀಸ್ ಕ್ವಾರ್ಟರ್ಸ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ಆತ್ಮಹತ್ಯೆಗೈಯ್ಯಲು ಕಾರಣವೇನೆಂದು ತಿಳಿದುಬಂದಿಲ್ಲ. ಇದೇ ವೇಳೆ ಕ್ವಾರ್ಟರ್ಸ್ನೊಳಗಿನಿಂದ ಒಂದು ಪತ್ರ ಪತ್ತೆಯಾಗಿರುವುದಾಗಿ ಸೂಚನೆಯಿದೆ. ಪೊಲೀಸ್ ಠಾಣೆಗೆ ತಲುಪುವವರೊಂದಿಗೆ ಉತ್ತಮ ರೀತಿಯಲ್ಲಿ ವ್ಯವಹರಿಸುವ ಅಧಿಕಾರಿಯಾಗಿದ್ದ ಇವರು ತನಿಖೆಯಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದರೆಂದು ಹೇಳಲಾಗುತ್ತಿದೆ. ಮೃತರು ಅವಿವಾಹಿತರಾಗಿದ್ದಾರೆ.
