ದೆಹಲಿ: ಸಿಪಿಐಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಸ್. ಸುಧಾಕರ ರೆಡ್ಡಿ (83) ನಿಧನ ಹೊಂದಿದರು. ಅಸೌಖ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಯಲ್ಲಿದ್ದರು. 2012ರಿಂದ 19ರ ವರೆಗೆ ಇವರು ಸಿಪಿಐ ಪ್ರಧಾನ ಕಾರ್ಯದರ್ಶಿ ಆಗಿದ್ದರು. ಎರಡು ಬಾರಿ ಆಂಧ್ರದಿಂದ ಲೋಕಸಭಾ ಸದಸ್ಯರಾ ಗಿದ್ದರು. ಪಕ್ಷದ ವಿವಿಧ ಹುದ್ದೆಗಳಲ್ಲಿ ಕಾರ್ಯಾಚರಿಸಿದ್ದರು.
