ಬದಿಯಡ್ಕ: ಓಣಂ ಸ್ಪೆಷಲ್ ಡ್ರೈವ್ ಕಾರ್ಯಾಚರಣೆಯಲ್ಲಿ ಬದಿಯಡ್ಕ ಎಕ್ಸೈಸ್ ರೇಂಜ್ನ ಅಸಿಸ್ಟೆಂಟ್ ಇನ್ಸ್ಪೆಕ್ಟರ್ (ಗ್ರೇಡ್) ಬಿಜೋಯ್ ಇ.ಕೆ.ರ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ೫.೨೨ ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿದೆ. ಇದಕ್ಕೆ ಸಂಬಂಧಿಸಿ ನೆಲ್ಲಿಕಟ್ಟೆ ಅದ್ರ್ಕುಳಿ ಅನಿಲ್ ಕುಮಾರ್ ಬಿ. ಎಂ ಬಾತನನ್ನು ಬಂಧಿಸಿ ಕೇಸು ದಾಖಲಿಸ ಲಾಗಿದೆ. ಈತ ಚಲಾಯಿಸುತ್ತಿದ್ದ ಸ್ಕೂಟರನ್ನು ಅಬಕಾರಿ ತಂಡ ವಶಕ್ಕೆ ತೆಗೆದುಕೊಂಡಿದೆ. ಸಿವಿಲ್ ಎಕ್ಸೈಸ್ ಆಫೀಸರ್ಗಳಾದ ಪ್ರಿಷಿ, ಟಿಪ್ಸನ್ ಟಿ.ಜೆ. ಮತ್ತು ಚಾಲಕ ಸಾಗರ್ ಎಂಬವರು ಈ ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಒಳಗೊಂಡಿದ್ದರು.






