ತಿರುವನಂತಪುರದಲ್ಲಿ ಕನ್ನಡ ಕೃತಿ ‘ಗುರುದರ್ಶನ’ ಬಿಡುಗಡೆ

ತಿರುವನಂತಪುರ: ಲೇಖಕ ಶಿವಾನಂದ ಕೋಟ್ಯಾನ್ ಕಟಪಾಡಿ ಅವರು ನಾರಾಯಣ ಗುರುಗಳ ಕುರಿತು ಬರೆದ ಗುರುದರ್ಶನ ಕನ್ನಡ ಕೃತಿಯನ್ನು ಕೇರಳದ ತಿರುವನಂತ ಪುರದಲ್ಲಿ ಬಿಡುಗಡೆಗೊಳಿ ಸಲಾಯಿತು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಬಿಕಾರ, ಕರ್ನಾಟಕ ಸರಕಾರ, ಭಾರತ್ ಭವನ ತಿರುವನಂತಪುರ ಕೇರಳ ಸರಕಾರಗಳ ಆಶ್ರಯದಲ್ಲಿ ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವ ಸಮಾರೋಪ ಸಮಾರಂಭದಲ್ಲಿ ರಾಜ್ಯ ಶಿಕ್ಷಣ ಸಚಿವ ಶಿವನ್ ಕುಟ್ಟಿ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡುತ್ತಾ ನಾರಾಯಣ ಗುರುಗಳ ತತ್ವಾದ ರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಅವರ ಜೀವನ ಚರಿತ್ರೆಯನ್ನು ಮುಂದಿನ ತಲೆಮಾರಿಗೆ ನೀಡಿದ ಲೇಖಕರ ಶ್ರಮ ಶ್ಲಾಘನೀಯ ಎಂದರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಇದರ ಸಂಸ್ಥಾಪಕ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ಲೇಖಕ ಶಿವಾನಂದ ಕೋಟ್ಯಾನ್ ಕಟಪಾಡಿ, ಎ.ಆರ್. ಸುಬ್ಬಯ್ಯಕಟ್ಟೆ, ಧಾರ್ಮಿಕ ಮುಂದಾಳು ಅರಿಬೈಲು ಗೋಪಾಲ ಶೆಟ್ಟಿ ಕಾಸರಗೋಡು, ಸಮಾಜಸೇವಕ ಮಂಜುನಾಥ ಆಳ್ವ ಮಡ್ವ, ನಿವೃತ್ತ ಅಂಡರ್ ಸೆಕ್ರಟೆರಿ ಕೇರಳ ಲೋಕಸೇವಾ ಆಯೋಗದ ಗಣೇಶ್ ಪ್ರಸಾದ್ ಪಾಣೂರು, ಅನಂತಪುರಿ ಗಡಿನಾಡ ಸಾಂಸ್ಕೃತಿಕ ಉತ್ಸವದ ಪ್ರಧಾನ ಸಂಚಾಲಕ ಎ.ಆರ್. ಸುಬ್ಬಯ್ಯ ಕಟ್ಟೆ, ಪ್ರೊ.ಶ್ರೀನಾಥ್, ವಕೀಲ ಎಂ.ಎಸ್. ಥೋಮಸ್ ಡಿ.ಸೋಜ, ಝಡ್ ಎ. ಕಯ್ಯಾರು, ರಾಧಾಕೃಷ್ಣ ಕೆ.ಉಳಿಯತ್ತಡ್ಕ ಪಾಲ್ಗೊಂಡಿದ್ದರು. ಲೇಖಕ ಪತ್ರಕರ್ತ ರವಿ ನಾಯ್ಕಾಪು ನಿರೂಪಣೆಗೈದರು. ಕಾಸರಗೋಡು ಗಸಾಸಾ ಅಕಾ ಡೆಮಿಯ ಕಾರ್ಯದರ್ಶಿ ಅಖಿಲೇಶ್ ನಗುಮುಗಂ ಸ್ವಾಗತಿಸಿ, ಅಧ್ಯಕ್ಷ ಎನ್.ಚನಿಯಪ್ಪ ನಾಯ್ಕ ವಂದಿಸಿದರು.

You cannot copy contents of this page