ಕಾಸರಗೋಡು: ಸಹೋದರಿಯ ಮನೆಗೆ ಬಂದ 17ರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಆರೋಪದಂತೆ ಪೊಲೀಸರು ಕೇಸು ದಾಖಲಿಸಿಕೊಂಡಿ ದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿಯ ದೂರಿನ ಮೇರೆಗೆ ಕಾಸರಗೋಡು ವನಿತಾ ಪೊಲೀಸರು 17ರ ಹರೆಯದ ಯುವಕನ ವಿರುದ್ಧ ಪೋಕ್ಸೋ ಪ್ರಕಾರ ಕೇಸು ದಾಖಲಿಸಿಕೊಂಡಿದ್ದಾರೆ. ಬಾಲಕಿಗೆ 15ನೇ ವರ್ಷ ಪ್ರಾಯದಿಂದ ಹಲವು ಬಾರಿ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಇತ್ತೀಚೆಗೆ ಪರೀಕ್ಷೆಗೆಂದು ಮನೆಯಿಂದ ಹೊರಟ ಬಾಲಕಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋದ ಘಟನೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸಹೋದರಿ ಪೊಲೀಸರಿಗೆ ದೂರು ನೀಡಿದ್ದಾಳೆ.
