ಕಾಸರಗೋಡು: ನಗರದ ಕರಂದ ಕ್ಕಾಡ್‌ನಲ್ಲಿ ಕಾಸರಗೋಡು ರೇಂಜ್ ಎಕ್ಸೈಸ್ ಇನ್ಸ್‌ಪೆಕ್ಟರ್ ಸೂರಜ್ ಎನ್.ರ ನೇತೃತ್ವದ ಅಬಕಾರಿ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ 25.92 ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಕೂಡ್ಲು ಉಜಿರೆಕೆರೆ ಬೆದ್ರಡ್ಕ ಹೌಸ್‌ನ ಮನೋಜ್ ಕುಮಾರ್ ವಿ.ಎನ್.(40) ಎಂಬಾತ ನನ್ನು ಬಂಧಿಸಿ ಪ್ರಕರಣ ದಾಖಲಿಸಲಾ ಗಿದೆ. ಆರೋಪಿಯನ್ನು ನಂತರ ನ್ಯಾಯಾಲಯದ ನಿರ್ದೇಶ ಪ್ರಕಾರ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಅಸಿಸ್ಟೆಂಟ್ ಎಕ್ಸೈಸ್ ಇನ್ಸ್‌ಪೆಕ್ಟರ್ ವಿನೋದನ್ ಕೆ.ವಿ. ಪ್ರಿವೆಂಟಿವ್ ಆಫೀಸರ್ ಉಣ್ಣಿಕೃಷ್ಣನ್ ಕೆ, ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಶಂಸುದ್ದೀನ್ ವಿ.ಟಿ, ಅನುರಾಗ್ ಎಂ. ಮತ್ತು ಚಾಲಕ ಮೈಕಲ್ ಜೋಸೆಫ್ ಎಂಬವರು ಒಳಗೊಂಡಿದ್ದಾರೆ.
