ಉಪ್ಪಳ: ಐಲ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಬೆಸ್ತರ ಮನೆಗಳು, ತೆಂಗಿನಮರಗಳು ನಾಶವಾಗುತ್ತಿವೆ. ಜನಪ್ರತಿನಿಧಿಗಳಿಗೆ, ಸ್ಥಳೀಯ ಸರಕಾರಿ ಕಚೇರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪರಿಹಾರ ಉಂಟಾಗಿಲ್ಲವೆಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್.ರಲ್ಲಿ ಮೀನು ಕಾರ್ಮಿಕರು ತಮ್ಮ ನೋವನ್ನು ತೋಡಿಕೊಂಡರು.
ಸ್ಥಳೀಯರ ಭಯವನ್ನು ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಯವರ ಗಮನಕ್ಕೆ ಈ ವಿಷಯವನ್ನು ತರುವುದಾಗಿ ಅಶ್ವಿನಿ ಭರವಸೆ ನೀಡಿದರು. ಗೋಪಾಲ ಎಸ್.ಐಲ್, ಪದ್ಮಾವತಿ ಟೀಚರ್, ನಿಶಾ ರೇಖಾ ಐಲ, ದುರ್ಗಾಪರಮೇಶ್ವರಿ ಮಹಿಳಾ ಸಂಘದ ಸದಸ್ಯೆಯರು, ಸ್ಥಳೀಯರು ಉಪಸ್ಥಿತರಿದ್ದರು.