ಕಾಸರಗೋಡು : ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಸರ್.ಎಂ. ವಿಶ್ವೇಶ್ವರಯ್ಯನವರ 165 ನೆಯ ಜನ್ಮದಿನಾಚರಣೆ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಸೀತಾಂಗೋಳಿಯಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿದ್ದ ಸಿರಿಗನ್ನಡ ವೇದಿಕೆಯ ಅಧ್ಯಕ್ಷ , ಸಾಹಿತಿ ವಿ. ಬಿ. ಕುಳಮರ್ವ ಸರ್ ಎಂ. ವಿಶ್ವೇಶ್ವರಯ್ಯನವರ ಬದುಕು, ವ್ಯಕ್ತಿತ್ವ, ಸಾಧನೆಗಳ ಕುರಿತು ಉಪನ್ಯಾಸ ನೀಡಿದರು. ಕ.ಸಾ.ಪ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ಅಧ್ಯಕ್ಷತೆ ವಹಿಸಿದ್ದರು.
ನ್ಯಾಯವಾದಿ ಥೋಮಸ್ ಡಿ’ಸೋಜ, ಸಾಹಿತಿ ಬಾಲಮಧುರಕಾನನ, ಪತ್ರಕರ್ತ ಪುರುಷೋತ್ತಮ ಭಟ್ ಶುಭಾಶಂಸನೆ ಮಾಡಿದರು. ಕ.ಸಾ.ಪ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ವಂದಿಸಿದರು.







