ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿ ಬೆಡ್‌ರೂಂನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಬಂದಡ್ಕ ಗ್ರಾಮೀಣ ಬ್ಯಾಂಕ್ ಸಮೀಪದಲ್ಲಿ ಕ್ಯಾಂಟೀನ್ ನಡೆಸುವ ಬೇತಲಂ ಉಂದತ್ತಡ್ಕದ ಸವಿತ ಎಂಬವರ ಪುತ್ರಿ ದೇವಿಕ (16) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ.  ಕುಂಡಂಕುಳಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಳೆ. ಇಂದು ಬೆಳಿಗ್ಗೆ ಈಕೆ ನೇಣು ಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವಿಷಯ ತಿಳಿದ ಬೇಡಗಂ ಪೊಲೀ ಸರು ಸ್ಥಳಕ್ಕಾಗಮಿಸಿ ಮೃತದೇಹದ ಮಹಜರು ನಡೆಸಿದರು. ದೇವಿಕ ಯಾಕಾಗಿ ನೇಣು ಬಿಗಿದು ಸಾವಿಗೀಡಾಗಿದ್ದಾಳೆಂದು ತಿಳಿದುಬಂ ದಿಲ್ಲ. ಬಾಲ ಸಂಘದ ಸಕ್ರಿಯ ಕಾರ್ಯಕರ್ತೆಯೂ ಆಗಿದ್ದಳು. ಈಕೆಯ ಸಾವು ನಾಡಿನಲ್ಲಿ, ಸಹಪಾಠಿ ಗಳಲ್ಲಿ ಶೋಕಸಾಗರ ಸೃಷ್ಟಿಸಿದೆ.

You cannot copy contents of this page