ಉಪ್ಪಳ: ಪ್ರಾಯಪೂರ್ತಿ ಯಾಗದ ಇಬ್ಬರು ಬಾಲಕರು ಚಲಾಯಿಸುತ್ತಿದ್ದ ಸ್ಕೂಟರ್ಗಳನ್ನು ಮಂಜೇಶ್ವರ ಪೊಲೀಸರು ವಶಪಡಿಸಿ ಕೊಂಡು ಆರ್ಸಿ ಮಾಲಕರ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ ಮಧ್ಯಾಹ್ನ ಕಡಂಬಾರಿನಿಂದ ಹೊಸಂಗಡಿಗೆ ತೆರಳುವ ರಸ್ತೆಯಲ್ಲಿ ಬಾಲಕನೋರ್ವ ಚಲಾಯಿಸುತ್ತಿದ್ದ ಸ್ಕೂಟರನ್ನು ಎಸ್ಐ ಉಮೇಶ್ ನೇತೃತ್ವದ ಪೊಲೀಸರು ವಶಪಡಿಸಿಕೊಂ ಡಿದ್ದಾರೆ. ಅದೇ ರೀತಿ ಸಂಜೆ ಕುಂಜತ್ತೂರು ಪದವಿನಲ್ಲೂ ಬಾಲಕ ನೋರ್ವ ಚಲಾಯಿಸುತ್ತಿದ್ದ ಸ್ಕೂಟರ್ ವಶಪಡಿಸಲಾಗಿದೆ.
