ಕುಂಬಳೆ: ಗಾಂಜಾ ಕೈವಶವಿರಿಸಿಕೊಂಡಿದ್ದ ವ್ಯಕ್ತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕೊಡ್ಯಮ್ಮೆ ಪೂಕಟ್ಟೆ ನಿವಾಸಿ ಅಬ್ದುಲ್ ರಹ್ಮಾನ್ (45) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತನ ಕೈಯಿಂದ 25 ಗ್ರಾಂ ಗಾಂಜಾ ವಶಪಡಿಸಲಾಗಿದೆ. ನಿನ್ನೆ ಸಂಜೆ ಪೂಕಟ್ಟೆ ರೇಶನ್ ಅಂಗಡಿ ಸಮೀಪದಲ್ಲಿ ಎಸ್‌ಐ ಪ್ರದೀಪ್ ಕುಮಾರ್ ನೇತೃತ್ವದ ಪೊಲೀಸರು ಗಸ್ತು ನಡೆಸುತ್ತಿದ್ದಾಗ ಸಂಶಯಾಸ್ಪದವಾಗಿ ಕಂಡು ಬಂದ ಅಬ್ದುಲ್ ರಹ್ಮಾನ್‌ನನ್ನು ತಪಾಸಣೆಗೈದಾಗ ಗಾಂಜಾ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನಧಿಕೃತ ಮದ್ಯ, ಮಾದಕ ವಸ್ತು ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸುವುದಾಗಿಯೂ ಪೊಲೀಸರು ತಿಳಿಸಿದ್ದಾರೆ.
