ಅಡೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಡೂರು ಬಳಿಯ ಮಾಟೆ ನಿವಾಸಿ ನಾರಾಯಣ ಯಾನೆ ನಾಣು (55) ಎಂಬವರು ಮೃತಪಟ್ಟ ವ್ಯಕ್ತಿಯಾಗಿ ದ್ದಾರೆ. ನಿನ್ನೆ ಮಧ್ಯಾಹ್ನ ಮನೆ ಸಮೀಪದ ಕೊಟ್ಟಿಗೆಯಲ್ಲಿ ಇವರು ನೇಣು ಹಾಕಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಕೂಡಲೇ ಅವರನ್ನು ಕೆಳಗಿಳಿಸಿ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಕಾಸರ ಗೋಡು ಜನರಲ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯ ಸಂಸ್ಕಾರ ನಡೆಯಿತು. ದಿವಂಗತರಾದ ಅಪ್ಪೆ ಬೆಳ್ಚಪ್ಪಾಡ-ತೇಯಮ್ಮ ದಂಪತಿ ಪುತ್ರನಾದ ಮೃತರು ಪತ್ನಿ ಚಂದ್ರಾವತಿ, ಮಕ್ಕಳಾದ ಪುನೀತ್ (ಗಲ್ಫ್), ಪವನ್, ಸಹೋದರರಾದ ದಾಮೋದರ, ಕೃಷ್ಣ, ಗೋಪಾಲ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
