ಉಪ್ಪಳ: ಕಳೆದ 15 ವರ್ಷಗಳಿಂದ ಚೆರುಗೋಳಿ ರಸ್ತೆಯ ಪಂಚಾಯತ್ ಕಟ್ಟಡದಲ್ಲಿ ಕಾರ್ಯಚರಿಸುತ್ತಿರುವ ಉಪ್ಪಳ ಅಗ್ನಿಶಾಮಕ ದಳಕ್ಕೆ ಮಂಗಲ್ಪಾಡಿ ಪಂಚಾಯತ್‌ನ ಪ್ರತಾಪನಗರ 7ನೇ ವಾರ್ಡ್ ಗುಳಿಗ ಬನದ ಪರಿಸರದಲ್ಲಿ ನೂತನ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ಕಳೆದ ಏಳು ತಿಂಗಳಿAದ ಕಾಮಗಾರಿ ನಡೆಯುತ್ತಿದೆ. ಕಟ್ಟಡ ನಿರ್ಮಾಣಗೊಂಡು ಸಾರಣೆ ಕೆಲಸಗಳು ನಡೆಯುತ್ತಿದ್ದು, ಶ್ರೀಘ್ರದಲ್ಲಿ ಕಟ್ಟಡ ನಿರ್ಮಾಣ ಕೆಲಸಗಳು ಪೂರ್ತಿಗೊಳ್ಳಲಿದೆ. ಈಗ ಕಾರ್ಯಚರಿಸುತ್ತಿ ರುವ ಕೇಂದ್ರ 2010 ಎಪ್ರಿಲ್‌ನಲ್ಲಿ ಆರಂ ಭಗೊಂಡಿತ್ತು. ಇಲ್ಲಿ ಸೌಕರ್ಯದ ಕೊರತೆ ಉಂಟಾಗಿದ್ದು, ಇದರಿಂದ ಅಧಿಕಾರಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಈಗ ನಿರ್ಮಾಣಗೊಳ್ಳುತ್ತಿರುವ ಎರಡು ಅಂತಸ್ತಿನ ಕಟ್ಟಡದಲ್ಲಿ ಕಚೇರಿ, ಶೆಡ್ಡ್, ಗ್ಯಾರೇಜ್, ವಿಶ್ರಾಂತಿ ಕೊಠಡಿ ಮೊದಲಾದ ಸೌಕರ್ಯ ಹೊಂದಿದ್ದು, ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪೂರ್ತಿಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
