ಪೈವಳಿಕೆ: ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ, ಜಿಲ್ಲಾ ಸಮಿತಿ ಮಾಜಿ ಅಧ್ಯಕ್ಷರಾಗಿದ್ದ ಕೆ. ಪಿ. ಕುಂಞಕಣ್ಣನ್ ರ ಒಂದನೇ ಸಂಸ್ಮರಣಾ ವಾರ್ಷಿಕ ಪೈವಳಿಕೆ ಮಂಡಲ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆಚರಿಸಲಾಯಿತು. ಮಂಡಲ ಅಧ್ಯಕ್ಷ ವಸಂತ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬೋಕ್ ಕಾಂಗ್ರೆಸ್ ಉಪಾಧ್ಯಕ್ಷ ನಾರಾಯಣ ಏದಾರ್ ಉದ್ಘಾಟಿಸಿದರು. ಶಾಜಿ ಎನ್.ಸಿ. ಸಂಸ್ಮರಣಾ ಭಾಷಣ ಮಾಡಿದರು. ಶಿವರಾಮ ಶೆಟ್ಟಿ ಸ್ವಾಗತಿಸಿದರು. ಎಡ್ವರ್ಡ್ ವಂದಿಸಿದರು. ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು.
