ಕುಂಬಳೆ: ಬಂದ್ಯೋಡು ಬಳಿ ಕುಕ್ಕಾರು ರಾಷ್ಟ್ರೀಯ ಹೆದ್ದಾರಿ ಬದಿಯ ಗೋಡೆಗೆ ಬೈಕ್ ಢಿಕ್ಕಿ ಹೊಡೆದು ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಉಪ್ಪಳ ನಿವಾಸಿ ನೀರಜ್ (35) ಎಂಬವರು ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ನಿನ್ನೆ ಸಂಜೆ 6.30ರ ವೇಳೆ ಅಪಘಾತವುಂ ಟಾಗಿದೆ. ಅಪಘಾತ ಬಳಿಕ ಅರ್ಧ ಗಂಟೆ ಕಾಲ ರಸ್ತೆಯಲ್ಲೇ ಬಿದ್ದಿದ್ದ ಯುವಕನನ್ನು ಇತರ ವಾಹನ ಪ್ರಯಾಣಿಕರು ಕುಂಬಳೆಯ ಆಸ್ಪತ್ರೆಗೆ ತಲುಪಿಸಿದ್ದರು. ಬಳಿಕ ಗಾಯ ಗಂಭೀರವಾಗಿರುವು ದರಿಂದ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಲಾಗಿದೆ.