ಪೈವಳಿಕೆ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜಯಂತಿ ಆಚರಣೆ ಪೈವಳಿಕೆ ಮಂಡಲ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ನಡೆಯಿತು. ಮಂಡಲ ಸಮಿತಿ ಅಧ್ಯಕ್ಷ ವಸಂತ ಕುಮಾರ್ ಮಾತನಾಡಿದರು. ಉಪಾಧ್ಯಕ್ಷ ಶಾಜಿ ಎನ್. ಸಿ. ಅಧ್ಯಕ್ಷತೆ ವಹಿಸಿದ್ದರು. ಬ್ಲೋಕ್ ಕಾಂಗ್ರೆಸ್ ಉಪಾಧ್ಯಕ್ಷ ನಾರಾಯಣ ಏದಾರ್, ಬ್ಲೋಕ್ ಕಾರ್ಯದರ್ಶಿ ರಾಘವೇಂದ್ರ ಭಟ್, ಎಡ್ವರ್ಡ್, ರಾಮ ಏದಾರ್ ಉಪಸ್ಥಿತರಿದ್ದರು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು. ಶಿವರಾಮ ಶೆಟ್ಟಿ ಸ್ವಾಗತಿಸಿದರು. ಗಂಗಾಧರ ನಾಯ್ಕ ವಂದಿಸಿದರು.
