ಉಪ್ಪಳ: ಉಪ್ಪಳ ಬಸ್ ನಿಲ್ದಾಣ ಸಮೀಪದ ಸರ್ವೀಸ್ ರಸ್ತೆಗೆ ಸಂಪರ್ಕವಿರುವ ಉಪ್ಪಳ ಮೀನು ಮಾರುಕಟ್ಟೆಗೆ ಪ್ರವೇಶಿಸುವ ರಸ್ತೆಯನ್ನು ದುರಸ್ತಿಗೊಳಿಸಿ ಸಂಚಾರಕ್ಕೆ ತೆರೆದುಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ವರ್ಷಗಳ ಹಿಂದೆ ಉಪ್ಪಳ ಪೇಟೆಯಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ವೇಳೆ ಸರ್ವೀಸ್ ರಸ್ತೆಗೆ ತಾಗಿಕೊಂಡಿರುವ ಮೀನು ಮಾರುಕಟ್ಟೆ ಪ್ರವೇಶಿಸುವ ಪ್ರಧಾನ ರಸ್ತೆಯನ್ನು ಮುಚ್ಚಲಾಗಿತ್ತು. ಆದರೆ ಕಾಮಗಾರಿ ಪೂರ್ಣಗೊಂಡರೂ ಇನ್ನೂ ರಸ್ತೆಯನ್ನು ಸಂಚಾರಕ್ಕೆ ತೆರೆದುಕೊಡದ ಹಿನ್ನೆಲೆಯಲ್ಲಿ ಮೀನು ಮಾರುಕಟ್ಟೆಗೆ ತೆರಳುವ ಜನರು ಬಸ್ ನಿಲ್ದಾಣದೊಳಗಿನಿಂದ ಹಾಗೂ ಪತ್ಪಾಡಿ ರಸ್ತೆ ಮೂಲಕ ಸುತ್ತುವರಿದು ಸಂಚರಿಸಬೇಕಾಗಿದೆ. ಈ ವೇಳೆ ವಾಹನಗಳ ದಟ್ಟಣೆಯಿಂದ ಸಮಸ್ಯೆ ಹೆಚ್ಚಾಗುತ್ತಿದೆ ಹೆದ್ದಾರಿ ಇಲಾಖೆ ಅಧಿಕಾರಿಗಳು ಕೂಡಲೇ ರಸ್ತೆ ದುರಸ್ತಿಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.







