ಕುಂಬಳೆ: ಮಸೀದಿಯಲ್ಲಿ ನಮಾಜು ಮಾಡಿ ಮನೆಗೆ ಹಿಂತಿರುಗುತ್ತಿದ್ದ ವ್ಯಕ್ತಿ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ಪೇರಾಲ್‌ಕಣ್ಣೂರಿನ ಅಬ್ದುಲ್ಲ (66) ಗಾಯಗೊಂಡವರು. ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಲಿಗೆ, ತಲೆಗೆ ಗಂಭೀರ ಗಾಯಗೊಂಡಿದ್ದು ಶಸ್ತ್ರ ಚಿಕಿತ್ಸೆ ನಡೆಸಲು ಡಾಕ್ಟರ್‌ಗಳು ಸೂಚಿಸಿದ್ದಾರೆ.
ಗಾಯಗೊಂಡ ಬೈಕ್ ಸವಾರ ಪೇರಾಲ್‌ನ ತೇಜಸ್ (20)ನನ್ನು ಜಿಲ್ಲಾ ಸಹಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಮಧ್ಯಾಹ್ನ 1 ಗಂಟೆ ವೇಳೆ ಪೇರಾಲ್ ನಾಟೆಕಲ್‌ನಲ್ಲಿ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ಗೋಡೆಗೆ ಢಿಕ್ಕಿ ಹೊಡೆದು ನಿಂತಿದೆ.