ಕಾಸರಗೋಡು: ಕನ್ನಡ ಗ್ರಾಮದಲ್ಲಿ ನಡೆದ ಶಿವರಾಮ ಕಾಸರಗೋಡು 60ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ನ ವತಿಯಿಂದ ಶಿವರಾಮ ಕಾಸರಗೋಡು ಅವರನ್ನು ಅಭಿನಂದಿಸಲಾಯಿತು. ಪರಿಷತ್‌ನ ಅಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ. ಸುರೇಶ ನೆಗಳಗುಳಿ, ಗಡಿನಾಡು ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಜಯಪ್ರಕಾಶ್ ತೊಟ್ಟೆತ್ತೋಡಿ, ಅಖಿಲ ಭಾರತ ಶರಣಸಾಹಿತ್ಯ ಪರಿಷತ್ ಅಧ್ಯಕ್ಷ ಸಿ. ಸೋಮಶೇಖರ್, ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಸ್ಥಾಪಕ ಅಧ್ಯಕ್ಷ ಕೆ.ಪಿ. ಮಂಜುನಾಥ ಸಾಗರ್ ಉಪಸ್ಥಿತರಿದ್ದರು.
ಬಳಿಕ ಡಾ. ಸುರೇಶ ನೆಗಳಗುಳಿ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ಜರಗಿತು.







