ಮಂಜೇಶ್ವರ: ಕನ್ನಡ ಭಾಷೆಯಲ್ಲಿ ಎನ್ಯುಮರೇಶನ್ ಫಾರ್ಮ್ ನೀಡದಿರುವುದು ಕೇಂದ್ರ ಚುನಾವಣಾ ಆಯೋಗ ಭಾಷಾ ಅಲ್ಪಸಂಖ್ಯಾತರ ಮೇಲೆ ನಡೆಸಿದ ದ್ರೋಹವೆಂದು ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿ ಆರೋಪಿಸಿದೆ. ಮಂಜೇಶ್ವರ ಮಂಡಲದಲ್ಲಿ ಮಲೆಯಾಳ ಭಾಷೆಯ ಫಾರ್ಮ್ ಭರ್ತಿಗೊಳಿಸಲು ಕನ್ನಡಿಗರಿಗೆ ಸಾಧ್ಯವಾಗುತ್ತಿಲ್ಲ. ಈಬಗ್ಗೆ ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿಗೆ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿ ಮನವಿ ನೀಡಿ ಕನ್ನಡಿಗರಿಗೆ ಕನ್ನಡದಲ್ಲಿ ಫಾರ್ಮ್ ನೀಡಬೇಕು ಮತ್ತು ೨೦೦೨ರ ಮತದಾರರ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಕನ್ನಡದಲ್ಲಿ ಪ್ರಕಟಿಸುವಂತೆ ಒತ್ತಾಯಿಸಿದೆ.







