ತಿರುವನಂತಪುರ: ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್) ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲು ಪಿಣರಾಯಿ ವಿಜಯನ್‌ರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸರ್ವಪಕ್ಷ ಸಭೆ ತೀರ್ಮಾನಿಸಿದೆ. ಪ್ರಸ್ತುತ ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಹೊರತಾಗಿ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ಆಡಳಿತ ಮತ್ತು ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಇಂತಹ ಕ್ರಮವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬೇಕೆಂದು ಸಭೆಯಲ್ಲಿ ಭಾಗವಹಿಸಿದ ವಿರೋಧ ಪಕ್ಷ ನಾಯಕ ವಿ.ಡಿ. ಸತೀಶನ್ ಅಭಿ ಪ್ರಾಯಪಟ್ಟರು. ಅದಕ್ಕೆ ಪೂರಕ ನಿಲುವನ್ನು ಸಭೆ ಕೊನೆಗೆ ಕೈಗೊಂಡಿತು. ಎಸ್.ಐ.ಆರ್ ವಿರುದ್ಧ ಸರಕಾರ ನ್ಯಾಯಾಲಯವನ್ನು ಸಮೀಪಿಸಿದ್ದಲ್ಲಿ ಅದರಲ್ಲಿ ವಿರೋಧ ಪಕ್ಷ ಕಕ್ಷಿದಾರ ನಾಗಲು ಸಿದ್ಧವೆಂದು ವಿರೋಧ ಪಕ್ಷ ನಾಯಕರು ತಿಳಿಸಿದರು.
ಸ್ಥಳೀಯಾಡಳಿತ ಸಂಸ್ಥೆಗಳಿಗೆ ಶೀಘ್ರ ಚುನಾವಣೆ ನಡೆಯಲಿರುವ ವೇಳೆಯಲ್ಲೇ ಎಸ್.ಐ.ಆರ್ ನಡೆಸುವ ಔಚಿತ್ಯವಾದರೂ ಏನು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ಈ ಬಗ್ಗೆ ಕಾನೂನು ತಜ್ಞರ ಸಲಹೆ ಅಲಿಸಿದ ಬಳಿಕ ನ್ಯಾಯಾಲಯವನ್ನು ಸಮೀಪಿಸುವುದಾಗಿ ಹೇಳಿದರು.
ಕಳೆದ ಲೋಕಸಭಾ ಚುನಾವಣೆ ವೇಳೆ ಮತದಾರ ಯಾದಿಯನ್ನು ನವೀಕರಿಸಲಾಗಿತ್ತು. ಅದು ಈಗಲೂ ಜ್ಯಾರಿಯಲ್ಲಿದೆ. ಹಾಗಿರುವಾಗ ೨೦೦೨ರ ಮತದಾರರ ಆಧಾರದಲ್ಲಿ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸುವ ಕ್ರಮ ಅವೈಜ್ಞಾನಿಕ ಹಾಗೂ ದುರುದ್ದೇಶ ದಿಂದ ಕೂಡಿದೆ ಎಂದು ವಿರೋಧ ಪಕ್ಷ ನಾಯಕ ವಿ.ಡಿ. ಸತೀಶನ್ ಆರೋಪಿಸಿದ್ದಾರೆ.
ಎಸ್.ಐ.ಆರ್. ಕ್ರಮ ಸಂವಿಧಾನ ಹಾಗೂ ಪ್ರಜಾತಂತ್ರ ವಿರುದ್ಧವಾದು ದೆಂದು ಸಭೆಯಲ್ಲಿ ಭಾಗವಹಿಸಿದ ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಹೇಳಿದರು.






