ಕುಂಬಳೆ: ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಅರೋಪಿಗಳ ಪತ್ತೆಗಾಗಿ ಕುಂಬಳೆ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಇದರಂತೆ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ 15 ಮಂದಿ ವಾರಂಟ್ ಆರೋಪಿಗಳು ಹಾಗೂ ಇಬ್ಬರು ತಲೆಮರೆಸಿಕೊಂಡ ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೆ ಪ್ರಾಯಪೂರ್ತಿಯಾಗದ ಮಕ್ಕಳು ಚಲಾಯಿಸಿದ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಲಾಗಿದೆ.






