ತಂಡಗಳ ಮಧ್ಯೆ ಹೊಡೆದಾಟ: ಓರ್ವನಿಗೆ ಗಂಭೀರ ಗಾಯ: ಕೊಲೆಯತ್ನ ಪ್ರಕರಣ ದಾಖಲು
ಕಾಸರಗೋಡು: ನಗರದ ಕೋಟೆಕಣಿಯಲ್ಲಿ ನಿನ್ನೆ ರಾತ್ರಿ ಎರಡು ತಂಡಗಳ ಮಧ್ಯೆ ಹೊಡೆದಾಟ ನಡೆದಿದೆ. ಇದರಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ಕೂಡ್ಲು ಮೀಪುಗುರಿ ನಿವಾಸಿ ತೇಜ ಯಾನೇ ಅಜೆಯ್ ಕುಮಾರ್ (೨೭) ಘರ್ಷಣೆಯಲ್ಲಿ ಗಂಭೀರ ಗಾಯಗೊಂಡಿದ್ದು, ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿದೆ. ಘರ್ಷಣೆಗೆ ಸಂಬಂಧಿಸಿ ಕಾಸರಗೋಡು ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದಕ್ಕೆ ಸಂಬಂಧಿಸಿ ಸನತ್ ಮತ್ತು ವಿಜಿತ್ ಎಂಬವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕಬ್ಬಿಣದ ಸರಳು ಮತ್ತು ಗಾಜಿನಿಂದ ಹೊಡೆದು ತೇಜರಿಗೆ ಗಾಯಗೊಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.