ಕಾಸರಗೋಡು: ಕನ್ನಡದ ಭಾಷಾ ಅಲ್ಪಸಂಖ್ಯಾತ ಪ್ರದೇಶವಾದ ಕಾಸರಗೋಡು ಜಿಲ್ಲೆಯ ಪಡಿತರ ಚೀಟಿಯಲ್ಲಿ ಕನ್ನಡ ಭಾಷೆಯನ್ನು ಅಳವಡಿಸಲು ಕ್ರಮ ಕೈಗೊಳ್ಳುವಂತೆ ಕೇರಳ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿಯವರು ಪ್ರಸ್ತುತ ಇಲಾಖೆಯ ಆಯುಕ್ತರಿಗೆ ನಿರ್ದೇಶ ನೀಡಿದ್ದಾರೆ.
ರೇಶನ್ ಕಾರ್ಡ್‌ಗಳು ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಯಲ್ಲಿದ್ದು, ಕನ್ನಡ ಭಾಷಾ ಅಲ್ಪ ಸಂಖ್ಯಾತರ ಹಿತಾಸಕ್ತಿ ಪರಿಗಣಿಸಿ, ರೇಶನ್ ಕಾರ್ಡ್‌ಗಳಲ್ಲಿ ಕನ್ನಡ ಭಾಷೆಯನ್ನೂ ಅಳವಡಿಸುವಂತೆ ಆಗ್ರಹಿಸಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರ, ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಕಾಸರಗೋಡು ಶಾಸಕ ಎನ್.ಎ. ನೆಲ್ಲಿಕುನ್ನು, ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯ ಕಟ್ಟೆ ಎಂಬವರನ್ನೊಳಗೊಂಡ ನಿಯೋಗ ಇತ್ತೀಚೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರನ್ನು ಭೇಟಿ ಮಾಡಿ ಅವರಿಗೆ ಮನವಿ ಸಲ್ಲಿಸಿದ್ದರು. ಅದರಂತೆ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿಯವರು ತಮ್ಮ ಇಲಾಖೆಯ ಆಯುಕ್ತರಿಗೆ ಜಿಲ್ಲೆಯಲ್ಲಿ ರೇಶನ್ ಕಾರ್ಡ್‌ನಲ್ಲಿ ಕನ್ನಡವನ್ನೂ ಅಳವಡಿಸುವಂತೆ ಸೂಚನೆ ನೀಡಿರುವುದಾಗಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.







