ಅಂತಾರಾಷ್ಟ್ರೀಯ ಕನ್ನಡ ಸಂಸ್ಕೃತಿ ಉತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪೈವಳಿಕೆ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಮಸ್ಕತ್, ಒಮಾನ್ ಘಟಕ ಹಾಗೂ ಕಾಸರಗೋಡು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಮಸ್ಕತ್, ಒಮಾನ್ ಘಟಕಗಳ ಆಶ್ರಯದಲ್ಲಿ 2026ರ ಮೇ.8 ರಂದು ಒಮಾನ್‌ನ ಮಸ್ಕತ್ ಸಿ.ಬಿ.ಎಫ್.ಸಿ. ಹಾಲ್ ಹೌಶೆರ್‌ನಲ್ಲಿ ಅಂತಾರಾಷ್ಟ್ರೀಯ ಕನ್ನಡ ಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ. ಇದರ ಕರಪತ್ರವನ್ನು ಇತ್ತೀಚೆಗೆ ಪೈವಳಿಕೆ ಕಾಯರ್ ಕಟ್ಟೆ ಸರಕಾರಿ ಹೈಸ್ಕೂಲಿನಲ್ಲಿ ನಡೆದ ಗಡಿನಾಡ ಕನ್ನಡ ರಾಜ್ಯೋತ್ಸವ ಸಮಾರಂಭದ ಉದ್ಘಾಟನಾ ವೇದಿಕೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಬಿಡುಗಡೆಗೊಳಿಸಿದರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಸ್ಥಾಪಕ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಒಮಾನ್ ಘಟಕ ಅಧ್ಯಕ್ಷ ಶಿವಾನಂದ ಕೋಟ್ಯಾನ್ ಕಟಪಾಡಿ, ಧಾರ್ಮಿಕ ಮುಂದಾಳು ಮಹಾಬಲೇಶ್ವರ ಭಟ್ ಎಡಕ್ಕಾನ, ಕರ್ನಾಟಕ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಅಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಕಾರ್ಮಿಕ ಪರಿಷತ್ತು ಬೆಂಗಳೂರು ಅಧ್ಯಕ್ಷ ಡಾ.ರವಿಶೆಟ್ಟಿ ಬೈಂದೂರು, , ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಜಿಲ್ಲಾಧ್ಯಕ್ಷ ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ ತೆಕ್ಕೇಮೂಲೆ, ಅಕಾಡೆಮಿ ಅಧ್ಯಕ್ಷ ಚನಿಯಪ್ಪ ನಾಯ್ಕ ಎನ್., ಕಾರ್ಯದರ್ಶಿ ಅಖಿಲೇಶ್ ನಗುಮುಗಂ, ಕೋಶಾಧಿಕಾರಿ ಜೆಡ್.ಎ.ಕಯ್ಯಾರ್, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಸುಕೇಶ್ ಎ., ಧಾರ್ಮಿಕ ಮುಖಂಡ ಅರಿಬೈಲು ಗೋಪಾಲ ಶೆಟ್ಟಿ, ವಾಮನ ರಾವ್ ಬೇಕಲ್, ಪುಷ್ಪರಾಜ ಬಿ ಎನ್, ಶ್ರೀನಿವಾಸ ನಾಯಕ್ ಇಂದಾಜೆ, ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ಗಮಕ ಕಲಾ ಪರಿಷತ್ತು ಅಧ್ಯಕ್ಷ ಟಿ ಶಂಕರಣರಾಯಣ ಭಟ್, ಪ್ರಾಂಶುಪಾಲ ಡೊಮಿನಿಕ್ ಆಗಸ್ಟಿನ್, ಮುಖ್ಯೋಪಾಧ್ಯಾಯಿನಿ ಭಾಗ್ಯಲಕ್ಷ್ಮಿ, ಆದಂ ಬಳ್ಳೂರು, ಸುಮಿತ್ರಾ, ಅಸೀಸ್ ಕಳಾಯಿ, ವಿದುಷಿ ತೀರ್ಥ ಕಟೀಲು, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ರವಿ ನಾಯ್ಕಾಪು ಉಪಸ್ಥಿತರಿದ್ದರು.

RELATED NEWS

You cannot copy contents of this page