ಬದಿಯಡ್ಕ: ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಬದಿಯಡ್ಕ ಪಂಚಾಯತ್‌ನ ವಿವಿಧ ವಾರ್ಡ್‌ಗಳಲ್ಲಿ ಜಯಗಳಿಸಿದ ಜನಪ್ರತಿನಿಧಿಗಳಿಗೆ ಭಾರತೀಯ ದಲಿತ್ ಕಾಂಗ್ರೆಸ್ ನೇತೃತ್ವ ದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು. ಬದಿಯಡ್ಕ ಮಂಡಲ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದಲಿತ್ ಕಾಂಗ್ರೆಸ್ ಮಂಡಲ ಸಮಿತಿ ಅಧ್ಯಕ್ಷ ಗಂಗಾಧರ ಗೋಳಿಯಡ್ಕ ಅಧ್ಯಕ್ಷತೆ ವಹಿಸಿದರು. ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಮಾನ್ಯ ಮುಖ್ಯ ಅತಿಥಿಯಾಗಿದ್ದರು. ದಲಿತ್ ಕಾಂಗ್ರೆಸ್ ಮಂಡಲ ಕೋಶಾಧಿಕಾರಿ ಗೋಪಾಲ ದರ್ಬೆತ್ತಡ್ಕ ಅಭಿನಂದನಾ ಭಾಷಣ ಮಾಡಿದರು.
ಜಿಲ್ಲಾ ಕಾರ್ಯದರ್ಶಿ ರಾಮ ಪಟ್ಟಾಜೆ, ಮಂಡಲ ಕಾಂಗ್ರೆಸ್ ಉಪಾಧ್ಯಕ್ಷ ಕೃಷ್ಣದಾಸ್ ದರ್ಭೆತ್ತಡ್ಕ ಮಾತನಾಡಿದರು. ಜನಪ್ರತಿನಿಧಿಗಳಾದ ಖಾದರ್ ಮಾನ್ಯ, ಶ್ಯಾಮ್ ಪ್ರಸಾದ್ ಮಾನ್ಯ, ಗಂಗಾಧರ ಗೋಳಿಯಡ್ಕ, ಲೀಲಾವತಿ, ಅಶ್ವತಿ, ಪ್ರಜ್ಞಾರನ್ನು ಅಭಿ ನಂದಿಸಲಾಯಿತು. ದಲಿತ್ ಕಾಂಗ್ರೆಸ್ ಮಂಡಲ ಸಮಿತಿ ಕಾರ್ಯದರ್ಶಿ ರಾಮ ಗೋಳಿಯಡ್ಕ ಸ್ವಾಗತಿಸಿ, ಲೀಲಾ ಪಟ್ಟಾಜೆ ವಂದಿಸಿದರು.







