ಮಂಗಲ್ಪಾಡಿ: ಪ್ರತಾಪನಗರ ಬೀಟಿಗದ್ದೆ ನಿವಾಸಿ ದಿ| ದಿವಾಕರ ಪೂಜಾರಿಯವರ ಪತ್ನಿ ದೇವಕಿ (63) ನಿಧನ ಹೊಂದಿದರು. ಇವರು ನಿನ್ನೆ ಸಂಜೆ ಮನೆಯಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಉಪ್ಪಳದ ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಅಷ್ಟರಲ್ಲಿ ನಿಧನ ಹೊಂದಿದರು.
ಮೃತರು ಮಕ್ಕಳಾದ ಉಷಾ, ಉದಯ, ಅನಿಲ್, ಸೊಸೆ ರಕ್ಷಿತಾ, ಅಳಿಯ ಹರೀಶ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಮನೆಗೆ ಸಂಘ ಪರಿವಾರದ ಮುಖಂಡರು, ಕಾರ್ಯಕರ್ತರ ಸಹಿತ ಹಲವಾರು ಮಂದಿ ಭೇಟಿ ನೀಡಿ ಅಂತಿಮನಮನ ಸಲ್ಲಿಸಿದರು. ನಿಧನಕ್ಕೆ ಪ್ರತಾಪನಗರ ಶಿವಶಕ್ತಿ ಫ್ರೆಂಡ್ಸ್ ಕ್ಲಬ್, ಜೈ ಹನುಮಾನ್ ಫ್ರೆಂಡ್ಸ್ ಕ್ಲಬ್ ಸಂತಾಪ ಸೂಚಿಸಿದೆ.







