ಬಸ್‌ನಲ್ಲಿ ಸಾಗಿಸುತ್ತಿದ್ದ ಕರ್ನಾಟಕ ಮದ್ಯ ವಶ: ಓರ್ವ ಸೆರೆ

ಉಪ್ಪಳ: ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಸಾಗಿಸುತ್ತಿದ್ದ 6.12 ಲೀಟರ್ ಕರ್ನಾಟಕ ಮದ್ಯ ಸಹಿತ ಓರ್ವನನ್ನು ಬಂಧಿಸಲಾಗಿದೆ. ಕಾಸರಗೋಡು ನೆಲ್ಲಿಕುಂಜೆ ಕಡಪ್ಪುರದ ಎಂ. ಸಂತೋಷ್ (38) ಎಂಬಾತನನ್ನು ಮಂಜೇಶ್ವರ ಎಕ್ಸೈಸ್ ಇನ್‌ಸ್ಪೆಕ್ಟರ್ ಜಿ.ಆದರ್ಶ್ ಹಾಗೂ ತಂಡ ಬಂಧಿಸಿದೆ. ನಿನ್ನೆ ಸಂಜೆ 5.30ರ ವೇಳೆ ಮಂಜೇಶ್ವರ ಅಬಕಾರಿ ಚೆಕ್‌ಪೋಸ್ಟ್‌ನಲ್ಲಿ ನಡೆಸಿದ ವಾಹನ ತಪಾಸಣೆ ವೇಳೆ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್  ನಿಂದ ಮದ್ಯ ವಶಪಡಿಸಿಕೊಳ್ಳಲಾಗಿದೆ. ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ ಗಳಾದ ಶ್ರೀನಿವಾಸನ್ ಪತ್ತಿಲ್, ವಿ. ಪ್ರಮೋದ್ ಕುಮಾರ್, ಪ್ರವೆಂಟೀವ್ ಆಫೀಸರ್‌ಗಳಾದ ಕೆ.ವಿ. ಪ್ರಜಿತ್ ಕುಮಾರ್, ಇ.ಎನ್.ಮಧು ಎಂಬವರು ಕಾರ್ಯಾಚರಣೆ ತಂಡದಲ್ಲಿದ್ದರು. ಆರೋಪಿ ಹಾಗೂ ಮದ್ಯವನ್ನು ಕುಂಬಳೆ ಅಬಕಾರಿ ರೇಂಜ್‌ಗೆ ಹಸ್ತಾಂತರಿಸಲಾಗಿದೆ.

You cannot copy contents of this page