ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ 172 ಲೀಟರ್ ಮದ್ಯ ವಶ: ಓರ್ವ ಸೆರೆ

ಮುಳ್ಳೇರಿಯ: ಆಟೋರಿಕ್ಷಾದಲ್ಲಿ  ಸಾಗಿಸುತ್ತಿದ್ದ  172.8 ಲೀಟರ್ ಗೋವಾ ನಿರ್ಮಿತ ಮದ್ಯವನ್ನು ಅಬಕಾರಿ ತಂಡ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ನಾಯ್ಕಾಪು ನಿವಾಸಿ ಧನಂಜಯನ್ (35) ಎಂಬಾತನನ್ನು ಬಂಧಿಸಿ ಅಬಕಾರಿ ಪ್ರಕರಣ ದಾಖಲಿಸಲಾಗಿದೆ. ಕಾಸರಗೋಡು ಎಕ್ಸೈಸ್ ಎನ್‌ಫೋರ್ಸ್‌ಮೆಂಟ್ ಆಂಡ್ ಆಂಟೀ ನರ್ಕೋಟಿಕ್ಸ್ ಸ್ಪೆಷಲ್ ಸ್ಕ್ವಾಡ್‌ನ ಪ್ರಿವೆಂಟೀವ್ ಆಫೀಸರ್ ಕೆ.ವಿ. ರಂಜಿತ್‌ರ ನೇತೃತ್ವದಲ್ಲಿ ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಶೈಲೇಶ್ ಕುಮಾರ್, ಸುಧೀರ್ ಪಾರಮ್ಮಲ್, ಮಂಜುನಾಥನ್, ಕಬೀರ್ ವಿ.ಪಿ, ಎಕ್ಸೈಸ್ ಇಂಟೆಲಿಜೆನ್ಸ್ ಬ್ಯೂರೋ ಪ್ರಿವೆಂಟೀವ್ ಆಫೀಸರ್ ಸಾಜನ್ ಅಪ್ಯಾಲ್, ಚಾಲಕ ಕ್ರಿಸ್ಟಿನ್ ಪಿ.ಎ. ಎಂಬವರನ್ನೊಳಗೊಂಡ ಅಬಕಾರಿ ತಂಡ ಆದೂರು ಗ್ರಾಮದ ಮೋಯಂತರಪಾರದಲ್ಲಿ ನಿನ್ನೆ ಈ ಅಬಕಾರಿ ಕಾರ್ಯಾಚರಣೆ ನಡೆಸಿದೆ. ಮಾಲು ಸಾಗಿಸಲು ಬಳಸಿದ ಆಟೋರಿಕ್ಷಾವನ್ನು ಅಬಕಾರಿ ತಂಡ ವಶಕ್ಕೆ ತೆಗೆದುಕೊಂಡಿದೆ.

You cannot copy contents of this page