ಕಾರಿನಲ್ಲಿ ಸಾಗಿಸುತ್ತಿದ್ದ ನಿಷೇಧಿತ ತಂಬಾಕು ಉತ್ಪನ್ನ ವಶ: ಓರ್ವ ಸೆರೆ

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಕಣ್ಣೂರು ಮುನೀಶ್ವರ ಕೋವಿಲ್‌ನಿಂದ ಪೊಲೀಸರು ಪತ್ತೆಹಚ್ಚಿ ವಶಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿ ತೃಕರಿಪುರ ನೋರ್ತ್ ನಿವಾಸಿ ಪಿ.ಕೆ. ಮುಹಮ್ಮದ್ ಸಫೀರ್ (26) ಎಂಬಾತನನ್ನು ಸೆರೆಹಿಡಿದು ಪ್ರಕರಣ ದಾಖಲಿಸಲಾಗಿದೆ.

ಈತ ಚಲಾಯಿಸುತ್ತಿದ್ದ ಕಾರಿನಿಂದ ೧೦ ಗೋಣಿ ಚೀಲಗಳಲ್ಲಿ ತುಂಬಿಸಿಡಲಾಗಿದ್ದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

RELATED NEWS

You cannot copy contents of this page