ಉಪ್ಪಳ: ಮಂಗಲ್ಪಾಡಿ ಪಂಚಾಯತ್ನ 7ನೇ ವಾರ್ಡ್ ಪ್ರತಾಪನಗರದಲ್ಲಿ 1.5 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉಪ್ಪಳ ಅಗ್ನಿ ಶಾಮಕ ಮತ್ತು ರಕ್ಷಣಾ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.5ರಂದು ಅಪರಾಹ್ನ 3.30ಕ್ಕೆ ಜರಗಲಿದೆ. ಶಾಸಕ ಎ.ಕೆ.ಎಂ ಅಶ್ರಫ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನ್ಲೈನ್ನಲ್ಲಿ ಉದ್ಘಾಟಿಸುವರು. ಸಂಸದ ರಾಜ್ಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿ, ಅಗ್ನಿ ಶಾಮಕದಳ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾಮಾಜಿಕ, ರಾಜಕೀಯ ಕ್ಷೇತ್ರದ ಪ್ರಮುಖ ವ್ಯಕ್ತಿಗಳು ಭಾಗವಹಿಸುವರು.






