ಕನ್ನಡ ಮಾಧ್ಯಮ ಅಧ್ಯಾಪಕರಿಗೆ ವಿದಾಯಕೂಟ ಸಮಾರಂಭ

ಕಾಸರಗೋಡು: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ವತಿಯಿಂದ 2025-26ನೇ ಸಾಲಿನಲ್ಲಿ ನಿವೃತ್ತಿ ಹೊಂದುತ್ತಿರುವ ಕನ್ನಡ ಮಾಧ್ಯಮ ಶಾಲೆಗಳ ಶಿಕ್ಷಕ ಶಿಕ್ಷಕಿಯರಿಗೆ ವಿದಾಯ ಕೂಟ ಸಮಾರಂಭ ಬೀರಂತಬೈಲಿನಲ್ಲಿರುವ ಕನ್ನಡ ಅಧ್ಯಾಪಕ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕಾಸರಗೋಡು ಸರಕಾರಿ ಕಾಲೇಜು ನಿವೃತ್ತ ಕನ್ನಡ ಪ್ರಾಧ್ಯಾಪಿಕೆ ಯು ಮಹೇಶ್ವರಿ ಉದ್ಘಾಟಿಸಿ, ನಮ್ಮ ಹಿರಿಯರು ಕನ್ನಡವನ್ನು ಉಳಿಸಿ ಬೆಳೆಸಲು ತುಂಬಾ ಪ್ರಯತ್ನಪಟ್ಟಿದ್ದಾರೆ. ಅವರ ಶ್ರಮದ ಫಲವನ್ನು ನಾವು ಅನುಭವಿಸುತ್ತಿದ್ದೇವೆ. ನಾವು ಕೂಡಾ ಹಿರಿಯರು ಮಾಡಿದ ಸಾಧನೆ ಕೆಲಸಗಳನ್ನು ಮಾಡಬೇಕು. ಕನ್ನಡಕ್ಕಾಗಿ ಹೋರಾಡಿದಂತಹ ಮಹನೀಯರನ್ನು ನಾವು ಮರೆಯಬಾರದು, ಅವರ ಹೋರಾಟದ ಆ ಫಲವನ್ನು ನಾವು ಇಂದು ನಮ್ಮ ಮಣ್ಣಿನ ಭಾಷೆಯನ್ನು ಉಳಿಸಲು ಪ್ರಯತ್ನ ಮಾಡಬೇಕು ಎಂದರು. ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರ ಸಮಿತಿಯ ಅಧ್ಯಕ್ಷ ಸುಕೇಶ ಎ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಕನ್ನಡ ಸಾಹಿತಿ, ಪತ್ರಕರ್ತ ರಾಧಾಕೃಷ್ಣ ಉಳಿಯತ್ತಡ್ಕ ಮುಖ್ಯ ಅತಿಥಿಯಾಗಿದ್ದರು. ಕಾಸರಗೋಡು ಜಿಲ್ಲಾ ವಿದ್ಯಾಧಿಕಾರಿ ಸವಿತಾ ಪುಂಡೂರು, ಕಾಸರಗೋಡು ಡಿ. ಪಿ. ಒ ಆಗಸ್ಟಿನ್ ಬರ್ನಾಡ್ ಮೊಂತೆರೊ, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶಶಿಧರ ಯಂ, ನಿವೃತ್ತ ವಿದ್ಯಾಧಿಕಾರಿಗಳಾದ ಪುಂಡರೀಕಾಕ್ಷ ಆಚಾರ್ಯ, ಕೇಂದ್ರ ಸಮಿತಿ ಉಪಾಧ್ಯಕ್ಷರಾದ ಪ್ರಭಾವತಿ ಕೆದಿಲಾಯ ಉಪಸ್ಥಿತರಿದ್ದರು. ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧಿಕೃತ ವಕ್ತಾರರಾದ ಸುಕೇಶ್ ಎ ಪ್ರಾಸ್ತಾವಿಕ ಮಾತನಾಡಿದರು.
ನಿವೃತ್ತಿ ಹೊಂದುವ ಕನ್ನಡ ಮಾಧ್ಯಮದ ಶಿಕ್ಷಕ-ಶಿಕ್ಷಕಿಯರನ್ನು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾರ್ಯ ಕ್ರಮದಲ್ಲಿ ಅಧ್ಯಾಪಕ ಸಂಘದ ಮಾಜಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರ ಸಮಿತಿಯ ಅಧಿಕೃತ ವಕ್ತಾರರಾದ ಬಾಬು ಕೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ನುಡಿದರು. ಕೋಶಾಧಿಕಾರಿ ಶರತ್ ಕುಮಾರ್ ಯಂ ವಂದಿಸಿದರು.ಸAಘಟನಾ ಕಾರ್ಯದರ್ಶಿ ಜಬ್ಬಾರ್, ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ, ಉಪಾಧ್ಯಕ್ಷೆ ಶ್ರೀಲತಾ ನಿರೂಪಿಸಿದರು. ಸಂಘಟನೆಯ ಸದಸ್ಯರು ಸಹಕರಿಸಿದರು.

You cannot copy contents of this page