ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯ ಮೃತದೇಹ ಜೀರ್ಣಗೊಂಡ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆ

ಮಂಜೇಶ್ವರ: ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೋರ್ವ  ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೀಂಜ ಪಂಚಾಯತ್ ವ್ಯಾಪ್ತಿಯ ಮೀಯಪದವು ಪೊಳ್ಳಕಜೆ ನಿವಾಸಿ ದಿ| ಧೂಮ ಮೂಲ್ಯರ ಪುತ್ರ ವಿಶ್ವನಾಥ (45) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೂರು ದಿನಗಳ ಹಿಂದೆ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಅಸೌಖ್ಯದಿಂದ ಬಳಸುತ್ತಿದ್ದ ಇವರು ಹಲವು ವರ್ಷಗಳಿಂದ ಏಕಾಂಗಿಯಾಗಿ ವಾಸಿಸುತ್ತಿದ್ದರೆನ್ನಲಾಗಿದೆ. ಶನಿವಾರ ಮಧ್ಯಾಹ್ನ ಮನೆಯಿಂದ ದುರ್ವಾಸನೆ ಬೀರುತ್ತಿದ್ದ ಹಿನ್ನೆಲೆಯಲ್ಲಿ ಪರಿಸರ ನಿವಾಸಿಗಳು ತೆರಳಿ ನೋಡಿದಾಗ ಜೀರ್ಣಾವಸ್ಥೆಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿಯಂತೆ ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹದ ಪಂಚನಾಮೆ ನಡೆಸಿದ್ದಾರೆ. ಮೃತರ ಸಹೋದರ ಬಾಬು ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಅಸಹಜ ಸಾವಿಗೆ ಕೇಸು ದಾಖಲಿಸಿದ್ದಾರೆ. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

RELATED NEWS

You cannot copy contents of this page