ಕಳತ್ತೂರು: ಮಹಿಳೆ ಸಾವಿಗೆ ಕಾರಣ ಹೃದಯಾಘಾತ

ಕುಂಬಳೆ: ಕಳತ್ತೂರಿನಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಗೃಹಿಣಿ ಮೃತಪಟ್ಟಿರುವುದು ಹೃದಯಾಘಾತದಿಂದಾಗಿದೆಯೆಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. ಕಳತ್ತೂರು ಅಮೆರಿಕ ರಸ್ತೆಯ  ಅಬೂಬಕ್ಕರ್ ಎಂಬವರ ಪತ್ನಿ ಆಮಿನ (70) ಮೊನ್ನೆ ಬೆಳಿಗ್ಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮನೆಯಿಂದ ದುರ್ನಾತ ಬೀರುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.   ಪೊಲೀಸರು ತಲುಪಿ ಪರಿಶೀಲಿಸಿದಾಗ  ಮನೆಯೊಳಗೆ ಮಂಚದಲ್ಲಿ ಮಲಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿತ್ತು. ಮನೆಯ ಮುಂಭಾಗ ಹಾಗೂ ಹಿಂಭಾಗದ ಬಾಗಿಲುಗಳು ತೆರೆದಿಟ್ಟ ಸ್ಥಿತಿಯಲ್ಲಿದ್ದುದು ಸಂಶಯಕ್ಕೆ ಕಾರಣವಾಗಿತ್ತು. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ  ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಂಬೋಲ್ ವಲಿಯ ಜುಮಾ ಮಸೀದಿ ಪರಿಸರದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

You cannot copy contents of this page