ಕುಂಬಳೆ: ರಸ್ತೆ ಬದಿ ನಿಲ್ಲಿಸಿದ್ದ ಟೋರಸ್ ಲಾರಿಯಿಂದ ಎರಡು ಬ್ಯಾಟರಿಗಳು ಕಳವಿಗೀಡಾದ ಬಗ್ಗೆ ದೂರಲಾಗಿದೆ. ಕುಂಬಳೆ ಭಾಸ್ಕರನಗರದ ಗುರುಪ್ರಸಾದ್ ಎಂಬವರು ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ನಿನ್ನೆ ಸಂಜೆ ಮನೆ ಸಮೀಪದ ರಸ್ತೆ ಬದಿಯಲ್ಲಿ ಲಾರಿಯನ್ನು ನಿಲ್ಲಿಸಲಾಗಿತ್ತು ಇಂದು ಬೆಳಿಗ್ಗೆ ನೋಡಿದಾಗ ಲಾರಿಯ ಎರಡು ಬ್ಯಾಟರಿಗಳು ಕಳವಿಗೀಡಾ ಗಿರುವುದು ಕಂಡುಬಂದಿದೆಯೆಂದು ಗುರುಪ್ರಸಾದ್ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಇದರಿಂದ 50 ಸಾವಿರ ರೂ.ಗಳ ನಷ್ಟ ಉಂಟಾಗಿರುವುದಾಗಿಯೂ ದೂರಿನಲ್ಲಿ ತಿಳಿಸಲಾಗಿದೆ. ಕಳ್ಳರನ್ನು ಪತ್ತೆಹಚ್ಚಲು ಈ ಪ್ರದೇಶದ ಸಿಸಿ ಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.






