17ರ ಹರೆಯದ ಬಾಲಕಿ ಗರ್ಭಿಣಿ : ಯುವಕನ ವಿರುದ್ಧ ಪೋಕ್ಸೋ ಕೇಸು

ಕುಂಬಳೆ: 17ರ ಹರೆಯದ ಬಾಲಕಿ ಗರ್ಭಿಣಿಯಾದ ಘಟನೆಗೆ ಸಂಬಂಧಿಸಿ 24ರ ಹರೆಯದ ಯುವಕನ ವಿರುದ್ಧ ಪೊಲೀಸರು ಪೋಕ್ಸೋ ಕೇಸು ದಾಖಲಿಸಿಕೊಂಡಿದ್ದಾರೆ. ಬಾಲಕಿ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಯುವಕ ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದಾರೆ. 18 ವರ್ಷ ಪೂರ್ತಿಗೊಂಡ ಬಳಿಕ ಇವರಿಬ್ಬರ ಮದುವೆ ನಡೆಸಲು ಈ ಇಬ್ಬರ ಮನೆಯವರು ಈ ಹಿಂದೆಯೇ ನಿರ್ಧರಿಸಿರುವುದಾಗಿ ಹೇಳಲಾಗುತ್ತಿದೆ. ಈ ಮಧ್ಯೆ ಕೆಲವು ದಿನಗಳ ಹಿಂದೆ ಬಾಲಕಿಗೆ ಶಾರೀರಿಕ ಅಸ್ವಸ್ಥತೆ ಉಂಟಾಗಿತ್ತೆನ್ನಲಾಗಿದೆ. ಇದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದು, ವೈದ್ಯರು ನಡೆಸಿದ ತಪಾಸಣೆ ವೇಳೆ ಬಾಲಕಿ 1 ತಿಂಗಳ ಗರ್ಭಿಣಿಯಾಗಿರುವ ವಿಷಯ ತಿಳಿದು ಬಂದಿದೆ. ಈ ಬಗ್ಗೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

You cannot copy contents of this page