ಉಪ್ಪಳ: ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಮಂಜೇಶ್ವರ ಮಂಡಲದಿಂದ ಸ್ಪರ್ಧಿಸಿದ ಐಕ್ಯರಂಗದ ಅಭ್ಯರ್ಥಿ ಎಕೆಎಂ ಅಶ್ರಫ್‌ರ ಭರ್ಜರಿ ಗೆಲುವು ಹಿನ್ನೆಲೆಯಲ್ಲಿ ಯುಡಿಎಫ್‌ನಿಂದ ಉಪ್ಪಳ ಸಹಿತ ವಿವಿಧ ಕಡೆಗಳಲ್ಲಿ ನಿನ್ನೆ ಸಂಜೆ ವಿಜಯೋತ್ಸವ ಆಚರಿಸಲಾಯಿತು. ಮೊಗ್ರಾಲ್ ಪುತ್ತೂರು, ಕುಂಬಳೆ ಭಾಗಗಳಿಂದ ವಾಹನಗಳ ಮೂಲಕ ಅಭ್ಯರ್ಥಿಯನ್ನು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದರು.






