ಕುಂಬಳೆ: ಕುಂಬಳೆ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡಿನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಯುವಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಅಪಘಾv ದಲ್ಲಿ ಇಬ್ಬರು ಗಂಭೀರ ಗಾಯಗೊಂ ಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಪಡುಬಿದ್ರೆ ಬಂಗರೆ ರಸ್ತೆಯ ಅಬ್ದುಲ್ ರಹೀಂರ ಪುತ್ರ ಮುಹಮ್ಮದ್ ರಾಹಿಲ್ (24) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಉಪ್ಪಳ ಬಪ್ಪಾಯಿತೊಟ್ಟಿಯ ಅಬ್ದುಲ್ ಜಸೀರ್, ಉಪ್ಪಳ ಕುರ್ಚಿಪಳ್ಳದ ಮುಹಮ್ಮದ್ ರೈಸ್ ಎಂಬಿವರು ಗಾಯಗೊಂಡವರಾಗಿದ್ದಾರೆ.
ನಿನ್ನೆ ಮುಂಜಾನೆ ಒಂದು ಗಂಟೆ ವೇಳೆ ಅಪಘಾತವುಂಟಾಗಿದೆ. ಮುಹಮ್ಮದ್ ರಾಹಿಲ್ ಹಾಗೂ ಸ್ನೇಹಿತರು ಸ್ಕೂಟರ್ನಲ್ಲಿ ಉಪ್ಪಳ ಭಾಗದಿಂದ ಬಂದ್ಯೋಡು ಭಾಗಕ್ಕೆ ತೆರಳುತ್ತಿದ್ದರು. ಈ ವೇಳೆ ಅದೇ ಭಾಗದಿಂದ ಬಂದ ಕಾರು ಯುವಕರು ಸಂಚರಿಸುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದು ಅಪಘಾತ ವುಂಟಾಗಿದೆಯೆಂದು ಕುಂಬಳೆ ಪೊಲೀಸರು ದಾಖಲಿಸಿಕೊಂಡ ಪ್ರಕರಣದಲ್ಲಿ ತಿಳಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಮಂಗಳೂರಿನ ಆಸ್ಪತ್ರೆಗೆ ತಲುಪಿಸಿದರೂ ಮುಹಮ್ಮದ್ ರಾಹಿಲ್ ನಿನ್ನೆ ಬೆಳಿಗ್ಗೆ 10 ಗಂಟೆ ವೇಳೆ ಮೃತಪಟ್ಟಿದ್ದಾರೆ. ಅಪಘಾತಕ್ಕೆ ಸಂಬಂಧಿಸಿ ಕಾರು ಚಲಾಯಿಸಿದ ವ್ಯಕ್ತಿ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.






