ಆಯುರ್ವೇದ ವಿದ್ಯಾರ್ಥಿನಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಆಯು ರ್ವೇದ ವಿದ್ಯಾರ್ಥಿನಿಯೋರ್ವೆ ಮನೆಯ ಬೆಡ್‌ರೂಂನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವೆಳ್ಳರಿಕುಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾಲೋಮ್ ವಲಿಯ ಪಾಮತಟ್ಟ್ ತುಂಬೆ ಮಠಂ ನಿವಾಸಿ ಬಿನೀಶ್ ಎಂಬವರ ಪುತ್ರಿ ಟಿ.ವಿ. ಆರ್ಯ (18) ಸಾವಿಗೀಡಾದ ಯುವತಿಯಾಗಿ ದ್ದಾಳೆ. ನಿನ್ನೆ ರಾತ್ರಿ 7.30ರ ವೇಳೆ ಆರ್ಯ ಬೆಡ್‌ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಳು. ಕೂಡಲೇ ಆಕೆಯನ್ನು ಕೆಳಗಿಳಿಸಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಈ ಬಗ್ಗೆ ತಂದೆ ನೀಡಿದ ದೂರಿನಂತೆ ವೆಳ್ಳರಿಕುಂಡ್ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವತಿ ನೇಣಿಗೆ ಶರಣಾಗಲು ಕಾರಣವೇನೆಂದು ತಿಳಿದು ಬಂದಿಲ್ಲ.

You cannot copy contents of this page