ಪುತ್ರ ಚಲಾಯಿಸಿದ ಸ್ಕೂಟರ್‌ನಿಂದ ರಸ್ತೆಗೆ ಬಿದ್ದು ತಾಯಿ ಮೃತ್ಯು

ಕುಂಬಳೆ: ಪುತ್ರ ಚಲಾಯಿಸುತ್ತಿದ್ದ ಸ್ಕೂಟರ್‌ನಿಂದ ರಸ್ತೆಗೆಸೆಯಲ್ಪಟ್ಟು ತಾಯಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಕುಂಬಳೆ ಸುನಾಮಿ ಕಾಲನಿಯ ಮೊಯ್ದೀನ್ ಕುಂಞಿಯವರ ಪತ್ನಿ ಹಾತಿಕ (48) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಸ್ಕೂಟರ್ ಚಲಾಯಿಸುತ್ತಿದ್ದ ಪುತ್ರ ಮುಬಾರಕ್ (19) ಸಣ್ಣ ಪುಟ್ಟ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ೭.೩೦ರ ವೇಳೆ ಕುಂಬಳೆ ರಾಷ್ಟ್ರೀಯ ಹೆದ್ದಾರಿಯ ದೇವಿನಗರ ಸರ್ವೀಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಇದರಿಂದ ಗಂಭೀರ ಗಾಯಗೊಂಡ  ಹಾತಿಕರನ್ನು ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಲಾಗಿದೆ. ಅಪಘಾತ ಬಗ್ಗೆ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಮೃತರು ಇತರ ಮಕ್ಕಳಾದ ಹಸೀನ, ಹನ್ನತ್, ಅಳಿಯಂದಿರಾದ ಕಬೀರ್, ಸಫ್ವಾನ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

RELATED NEWS

You cannot copy contents of this page